ಕೊಳ್ತಿಗೆ : ಕೆರೆಗೆ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು

ಪುತ್ತೂರು : ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಡಿ.31ರಂದು ನಡೆದಿದೆ.

ಕೊಳ್ತಿಗೆ ಗ್ರಾಮದ ಕೆಮ್ಮಾರ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಮ್ಚಿನಡ್ಕ ನಿವಾಸಿ ಬಾಳಪ್ಪ ಎಂಬವರ ಪುತ್ರ ಅವಿನಾಶ್ (22ವ.) ಎಂಬವರೇ ಮೃತಪಟ್ಟ ದುರ್ದೈವಿ ಯುವಕ.

ಪುತ್ತೂರು ಅಗ್ನಿಶಾಮಕ ದಳದವರು ದೇಹವನ್ನು ಕೆರೆಯಿಂದ ಮೇಲೆಕ್ಕೆತ್ತಲಾಯಿತು.ಬೆಳ್ಳಾರೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ,ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.