0-18 ವರ್ಷದೊಳಗಿನ ಮಕ್ಕಳಿಗೆ ತಿಂಗಳಿಗೆ ರೂ.ಒಂದು ಸಾವಿರಗಳಂತೆ ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕದಿಂದ ಅರ್ಜಿ ಆಹ್ವಾನ

Share the Article

ಅದೆಷ್ಟೋ ವಿದ್ಯಾರ್ಥಿಗಳು ಬಡತನದಿಂದಲೋ ಅಥವಾ ಇನ್ಯಾವುದೋ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗಿರುತ್ತಾರೆ. ಆರ್ಥಿಕ ತೊಂದರೆಯಿಂದ ಮಕ್ಕಳು ದುಡಿಮೆಗೆ ಹೋಗುತ್ತಿರುವುದನ್ನು ಕೂಡ ಗಮನಿಸಬಹುದು.ಈ ನಿಟ್ಟಿನಲ್ಲಿ ಒಳ್ಳೆಯ ಶಿಕ್ಷಣ ಮಕ್ಕಳ ಪಾಲಾಗಬೇಕೆಂದು ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕ ನಿರ್ಧರಿಸಿದೆ.

ಮಕ್ಕಳನ್ನು ಕುಟುಂಬದ ವಾತಾವರಣದಲ್ಲಿ ಬೆಳೆಸಲು ಹಾಗೂ ಮಕ್ಕಳನ್ನು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣ ಮುಂದುವರಿಕೆಗೆ, ಮಕ್ಕಳ ವೈದ್ಯಕೀಯ, ಪೌಷ್ಠಿಕ ಆಹಾರ, ಶೈಕ್ಷಣಿಕ ವೃತ್ತಿ ತರಬೇತಿ ಮತ್ತು ಇತರೆ ಅವಶ್ಯಕತೆ ಪೂರೈಸಲು ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವ ಸಲುವಾಗಿ ಬಾಲನ್ಯಾಯ(ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ 2015 ರಡಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಾಯೋಜಕತ್ವದಡಿ ಪಾಲನೆ ಮತ್ತು ಪೋಷಣೆ ಅಗತ್ಯವಿರುವ 0-18 ವರ್ಷದೊಳಗಿನ ಮಕ್ಕಳಿಗೆ ತಿಂಗಳಿಗೆ ರೂ.ಒಂದು ಸಾವಿರಗಳಂತೆ 3 ವರ್ಷಗಳವರೆಗೆ ಒಂದು ಕುಟುಂಬದ ಗರಿಷ್ಠ 2 ಮಕ್ಕಳಿಗೆ ಪೋಷಣಾ ಭತ್ಯೆ ನೀಡುವ ಕಾರ್ಯಕ್ರಮಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ತಂದೆ/ ಕುಟುಂಬದ ದುಡಿಯುವ ಸದಸ್ಯರನ್ನು ಕಳೆದುಕೊಂಡಿದ್ದಲ್ಲಿ, ತಂದೆ ತಾಯಿ ಇಲ್ಲದ ಮಕ್ಕಳಿಗೆ, ತಂದೆ ತಾಯಿಗಳು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ, ಕುಟುಂಬಕ್ಕೆ ಆಧಾರವಾಗಿದ್ದ ಪೋಷಕರು ಜೈಲಿನಲ್ಲಿದ್ದರೆ, ಅಂತಹ ಕುಟುಂಬದ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

Leave A Reply