ಮಕ್ಕಳಿಲ್ಲವೆಂಬ ಖಿನ್ನತೆಗೆ ಒಳಗಾಗಿಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಮಕ್ಕಳಿಲ್ಲವೆಂಬ ಖಿನ್ನತೆಗೆ ಒಳಗಾಗಿಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

 

ಭೋಪಾಲ್: ಮಕ್ಕಳಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ಮಹಿಳೆ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿದೆ.

ಸಂಗೀತಾ(53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಸಂಗೀತಾ ಉದ್ಯಮಿಯನ್ನು ಮದುವೆಯಾಗಿದ್ದು, ಹಲವು ವರ್ಷಗಳಿಂದ ಮಗುವಿಗೆ ಜನ್ಮ ನೀಡಲು ಸಾಧ್ಯವಾಗಿಲ್ಲ ಎಂಬ ಕಾರಣಕ್ಕೆ ಮನನೊಂದಿದ್ದರು. ಹೀಗಾಗಿ ವಸತಿ ಕಟ್ಟಡವೊಂದರ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹದು ಎಂದು ಶಂಕಿಸಲಾಗಿದೆ.

ಮಹಿಳೆ ಬೆಳಗ್ಗೆ 6:30ರ ಹೊತ್ತಿಗೆ ಶ್ಯಾಮ್ ಹೈಟ್ಸ್ ಅಪಾರ್ಟ್‍ಮೆಂಟ್‍ನ 6ನೇ ಮಹಡಿಯಿಂದ ಜಿಗಿದಿದ್ದಾರೆ. ಹೊರಗಡೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಗಮನಿಸಿದ ಭದ್ರತಾ ಸಿಬ್ಬಂದಿಗಳು, ತಕ್ಷಣ ಆಕೆಯ ಪತಿಗೆ ಮಾಹಿತಿ ನೀಡಿ, ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂಗೀತಾ ಮಕ್ಕಳನ್ನು ಪಡೆಯಲು ಕಳೆದ 6 ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ನಿದ್ರಾ ಹೀನತೆಯಿಂದಲೂ ಬಳಲುತ್ತಿದ್ದ ಮಹಿಳೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು. ಮದುವೆಯಾಗಿ 25 ವರ್ಷಗಳಾಗಿದ್ದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಆಕೆ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ

ಮಹಿಳೆಯ ಆತ್ಮಹತ್ಯೆಯ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆಗೆ ಆಕೆಯ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಇಂದೋರ್‍ನ ಕನಾಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Leave A Reply

Your email address will not be published.