ಮಂಗಳೂರು: ‘ವಿಶ್ವಕೊಂಕಣಿ ಸರದಾರ’ ಬಸ್ತಿ ವಾಮನ ಶೆಣೈ ಇನ್ನಿಲ್ಲ

ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರಾದ ಬಸ್ತಿ ವಾಮನ ಶೆಣೈ(88) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

 

ಬಸ್ತಿ ವಾಮನ ಶೆಣೈ ಅವರು ಎರಡು ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು. ‘ವಿಶ್ವಕೊಂಕಣಿ ಸರದಾರ’ ಎಂದೇ ಬಿರುದು ಪಡೆದಿದ್ದ ಬಸ್ತಿ ವಾಮನ ಶೆಣೈ ಅವರು ಮಂಗಳೂರಿನ ಶಕ್ತಿನಗರದಲ್ಲಿ ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವಕೊಂಕಣಿ ಕೇಂದ್ರವನ್ನು ಸ್ಥಾಪಿಸಿದ್ದರು.

ಬಸ್ತಿ ವಾಮನ ಶೆಣೈ ಅವರ ಪಾರ್ಥಿವ ಶರೀರವನ್ನು ಸೋಮವಾರ ಬೆಳಗ್ಗೆ 9ರಿಂದ 10ರವರೆಗೆ ವಿಶ್ವಕೊಂಕಣಿ ಕೇಂದ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಮಧ್ಯಾಹ್ನ 12ಕ್ಕೆ ಹುಟ್ಟೂರು ಬಂಟ್ವಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Leave A Reply

Your email address will not be published.