ಸುಳ್ಯ : ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ಸಂಗ್ರಹಿಸಿಟ್ಟಿದ್ದ 11 ಕೆ.ಜಿ. ಗಾಂಜಾ ವಶ

Share the Article

ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ಇಂದು ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಪಲ್ಲತ್ತೂರಿನ ಮೊಯಿದ್ದೀನ್ ಕುಂಞ ಎಂಬವರು ಕೊಠಡಿ ಬಾಡಿಗೆ ಪಡೆದು ಕುಟುಂಬದೊಂದಿಗೆ ವಾಸವಿದ್ದರು.

ಇಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಪುತ್ತೂರು ಅಬಕಾರಿ ಇಲಾಖೆಯವರು ಸುಳ್ಯ ಅಬಕಾರಿ ಇಲಾಖೆಯವರೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದರು.

Leave A Reply