‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್ ನಲ್ಲಿ ವರ್ಕೌಟ್ ಮಾಡಿದ ಮೋದಿ !! | ಪ್ರಧಾನಿಯ ವರ್ಕೌಟ್ ವೀಡಿಯೋ ಸಖತ್ ವೈರಲ್

Share the Article

ಪ್ರಧಾನಿ ನರೇಂದ್ರ ಮೋದಿ ಯುವಕರಿಗೆ ಸದಾ ಒಂದಿಲ್ಲೊಂದು ಕಾರ್ಯಗಳಲ್ಲಿ ಪ್ರೋತ್ಸಾಹ ನೀಡುತ್ತಲೇ ಬಂದಿದ್ದಾರೆ. ಹಾಗೆಯೇ ಇದೀಗ ‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದೆ.

ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕಿ, ವಿಶ್ವದರ್ಜೆಯಲ್ಲಿ ಅಥ್ಲೆಟಿಕ್ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂಬುದು ಮೋದಿಯ ಬಹುದೊಡ್ಡ ಆಸೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮೋದಿ ಅವರು ಉತ್ತರ ಪ್ರದೇಶದ ಮೀರತ್‍ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಅಡಿಪಾಯ ಹಾಕಿದರು.

ಈ ವಿಶ್ವವಿದ್ಯಾಲಯವನ್ನು ಮೀರತ್‍ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಪ್ರದೇಶಗಳಲ್ಲಿ 700 ಕೋಟಿ ರೂ. ಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಜಿಮ್‍ಗೆ ತೆರಳಿದ ಮೋದಿ ಅವರು ದೇಶಾದ್ಯಂತ ‘ಫಿಟ್ ಇಂಡಿಯಾ’ ಎಂಬ ಸಂದೇಶವನ್ನು ಹರಡುವ ಸಲುವಾಗಿ ಸ್ವತಃ ಅವರೇ ಜಿಮ್ ನಲ್ಲಿ ವರ್ಕೌಟ್ ಮಾಡಿದ್ದಾರೆ. ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಮೋದಿ ಅಭಿಮಾನಿಗಳು ಖುಷ್ ಆಗಿದ್ದಾರೆ.

ಈ ವೇಳೆ ಮಾತನಾಡಿದ ಮೋದಿ ಅವರು, 700 ಕೋಟಿ ರೂಪಾಯಿ ಮೌಲ್ಯದ ಈ ವಿಶ್ವವಿದ್ಯಾಲಯವು ಯುವಕರಿಗೆ ಅಂತಾರಾಷ್ಟ್ರೀಯ ಕ್ರೀಡಾ ಸೌಲಭ್ಯಗಳನ್ನು ಒದಗಿಸುತ್ತದೆ. ಪ್ರತಿ ವರ್ಷ 1000ಕ್ಕೂ ಹೆಚ್ಚು ಹುಡುಗಿಯರು ಮತ್ತು ಹುಡುಗರು ಇಲ್ಲಿಂದ ಪದವಿ ಪಡೆಯುತ್ತಾರೆ ಎಂದು ತಿಳಿಸಿದರು.

ಏನಿದರ ವಿಶೇಷತೆ?

ಈ ಕ್ರೀಡಾ ವಿಶ್ವವಿದ್ಯಾಲಯದಲ್ಲಿ ಹಾಕಿ, ಫುಟ್‍ಬಾಲ್ ಮೈದಾನಗಳು, ಬಾಸ್ಕೆಟ್‍ಬಾಲ್, ವಾಲಿಬಾಲ್, ಹ್ಯಾಂಡ್‍ಬಾಲ್ ಮತ್ತು ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜುಕೊಳ, ಹಲವು ಹಾಲ್ ಮತ್ತು ಸೈಕ್ಲಿಂಗ್ ಟ್ರ್ಯಾಕ್ ಎಲ್ಲ ರೀತಿಯ ಕ್ರೀಡೆಗಳಿಗೂ ಇಲ್ಲಿ ಸ್ಥಳವಕಾಶವನ್ನು ನೀಡಲಾಗುತ್ತದೆ. ಈ ವಿಶ್ವವಿದ್ಯಾಲಯದಲ್ಲಿ ಆರ್ಚರಿ, ವೇಟ್‍ಲಿಫ್ಟಿಂಗ್, ಶೂಟಿಂಗ್, ಕ್ಯಾನೋಯಿಂಗ್, ಕಯಾಕಿಂಗ್, ಜಿಮ್ನಾಸ್ಟಿಕ್ಸ್ ಮತ್ತು ಸ್ಕ್ವಾಷ್ ಸೇರಿದಂತೆ ಕ್ರೀಡೆಗೆ ಸಂಬಂಧಿಸಿದಂತೆ ಹಲವು ಸೌಲಭ್ಯಗಳು ಲಭ್ಯವಿರುತ್ತವೆ.

ಘೋಷಣೆಯ ಪ್ರಕಾರ, ವಿಶ್ವವಿದ್ಯಾನಿಲಯವು 540 ಮಹಿಳೆಯರು ಮತ್ತು 540 ಪುರುಷರನ್ನು ಒಳಗೊಂಡಂತೆ 1,080 ಕ್ರೀಡಾಪಟುಗಳಿಗೆ ತರಬೇತಿ ನೀಡಲು ಸಾಧ್ಯವಾಗುತ್ತದೆ.

Leave A Reply