ರಾಜ್ಯದಲ್ಲಿ ಕೊರೋನಾ ಅಬ್ಬರಕ್ಕೆ ಮತ್ತೆ ಬಾಗಿಲು ಮುಚ್ಚಲಿದೆಯೇ ಶಾಲಾ-ಕಾಲೇಜ್ !??| ಈ ಕುರಿತು ಸರಕಾರಕ್ಕೆ ಸಲಹೆ ನೀಡಿದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ

ದಿನ ಕಳೆದಂತೆ ಓಮಿಕ್ರಾನ್‌ ಜೊತೆಗೆ ಕೊರೋನಾ ವೈರಸ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಳವಾಗುತ್ತಿದೆ. ಈ ಬೆಳವಣಿಗೆ ಆತಂಕ ಮೂಡಿಸಿದ್ದು, ಮತ್ತೆ ಶಾಲೆಗಳು ಬಂದ್‌ ಆಗಲಿವೆಯಂತೆ. ಈಗಾಗಲೇ ಶಾಲೆ, ಕಾಲೇಜುಗಳನ್ನು ಬಂದ್‌ ಮಾಡುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆಯನ್ನು ಕೂಡ ನೀಡಿದೆ ಎಂದು ತಿಳಿದುಬಂದಿದೆ.

 

ರಾಜ್ಯದಲ್ಲಿ ಹೊಸ ವರ್ಷದ ಮೊದಲ ದಿನವೇ ಬರೋಬ್ಬರಿ ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಈ ನಡುವಲ್ಲೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕರ್ನಾಟಕದಲ್ಲಿ ದಿನಂಪ್ರತಿ ಕೊರೊನಾ ಸೋಂಕಿನ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಹೊಸ ವರ್ಷದ ಮೊದಲ ದಿನವೇ ಬರೋಬ್ಬರಿ 1033 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 30,08,370 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ 9386 ಸಕ್ರೀಯ ಕೋವಿಡ್‌ ಪ್ರಕರಣಗಳಿವೆ. ಅಲ್ಲದೇ ಇದುವರೆಗೆ ಒಟ್ಟು 38,340 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.ರಾಜ್ಯದಲ್ಲಿ ಓಮಿಕ್ರಾನ್‌ ಪ್ರಕರಣ ಹೆಚ್ಚುತ್ತಿರುವ ಜೊತೆಗೆ ಪಾಸಿಟಿವಿಟಿ ರೇಟ್‌ ಕೂಡ ಏರಿಕೆ ಕಾಣುತ್ತಿದೆ. ಕರ್ನಾಟಕದಲ್ಲಿ ಸದ್ಯ ಶೇ.0.86 % ಕೊರೊನಾ ಪಾಸಿಟಿವಿಟಿ ದರವಿದ್ದು, ಮರಣ ಪ್ರಮಾಣ ಶೇ.0.48% ದಷ್ಟಿದೆ.

ಕರ್ನಾಟಕದಲ್ಲಿ ಕೋವಿಡ್, ಕೋವಿಡ್‌ ರೂಪಾಂತರಿ ಒಮಿಕ್ರಾನ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಶಾಲಾ-ಕಾಲೇಜುಗಳನ್ನು ಬಂದ್‌ ಮಾಡಲಾಗುತ್ತದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಜೊತೆಗೆ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುವ ಸಾಧ್ಯತೆಯಿದೆ. ಅದ್ರಲ್ಲೂ ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯನ್ನು ಕಾಣುತ್ತಲೇ ಇದೆ. ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್‌ ಆಗುವ ಲಕ್ಷಣ ಗೋಚರಿಸುತ್ತಿದೆ.

ಕಳೆದ ಮೂರು ತಿಂಗಳ ಹಿಂದೆಯಷ್ಟೆ ಆರಂಭವಾಗಿದ್ದ ಶೈಕ್ಷಣಿಕ ಚಟುವಟಿಕೆ ಮತ್ತೆ ಸ್ತಬ್ದವಾಗುವ ಭೀತಿ ಎದುರಾಗಿದೆ. ಈಗಾಗಲೇ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಜಿಲ್ಲೆಗಳಲ್ಲಿ ಸೋಂಕು ಉಲ್ಬಣವಾಗುವ ಸೂಚನೆ ದೊರೆತಿದೆ. ಕೋವಿಡ್‌ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಕೋವಿಡ್‌ ತಾಂತ್ರಿಕ ಸಮಿತಿಯ ಸಭೆಯನ್ನು ನಡೆಸಿದ್ದಾರೆ. ಸಭೆಯಲ್ಲಿ ಕೋವಿಡ್‌ ತಾಂತ್ರಿಕ ಸಮಿತಿಯ ಸೂಚನೆಯ ಆಧಾರದ ಮೇಲೆ ರಾಜ್ಯದಲ್ಲಿ ಲಾಕ್‌ಡೌನ್‌ ಹೇರಿಕೆ ಮಾಡುವಂತೆ ಸಲಹೆಯನ್ನು ನೀಡಿದ್ದಾರೆ. ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಶೇ.1ಕ್ಕಿಂತಲೂ ಕಡಿಮೆಯಿದೆ. ಒಂದೊಮ್ಮೆ ಶೇ.1ರಷ್ಟು ಕೊರೊನಾ ಸೋಂಕಿನ ಪ್ರಮಾಣ ದಾಖಲಾದ್ರೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡುವಂತೆ ಕೋವಿಡ್‌ ತಾಂತ್ರಿಕ ಸಮಿತಿ ಸೂಚಿಸಿದೆ. ಮದುವೆ, ಸಭೆ ಸಮಾರಂಭ ಹಾಗೂ ಅಂತ್ಯಕ್ರಿಯೆ ಸೇರಿದಂತೆ ಹಲವು ನಿರ್ಬಂಧಗಳನ್ನು ಹೇರಲಾಗುತ್ತದೆ.

Leave A Reply

Your email address will not be published.