ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳ ರದ್ದು,ವಾರಾಂತ್ಯ ದೇವರ ದರ್ಶನಕ್ಕೂ ಅವಕಾಶವಿಲ್ಲ
ಕಡಬ : ದೇಶದಾದ್ಯಂತ ಮತ್ತು ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಆದೇಶದಂತೆ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳನ್ನು ರದ್ದು ಮಾಡಲಾಗಿದೆ.
ಶ್ರೀ ದೇವಳಕ್ಕೆ ಬರುವ ಭಕ್ತಾದಿಗಳಗೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ ಹಾಗೂ ವಾರಾಂತ್ಯದ ಶುಕ್ರವಾರ ರಾತ್ರಿ ಗಂಟೆ 10ರಿಂದ ಸೋಮವಾರ ಬೆಳಗ್ಗೆ ಗಂಟೆ 8ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ರವಿವಾರಗಳಂದು ಶ್ರೀ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ.
ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶವಿರುವುದಾಗಿದೆ.
ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಮತ್ತಿತರ ಕೋವಿಡ್ ನಿಯಂತ್ರಣದ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನವನ್ನು ಪಡೆಯಬಹುದಾಗಿದೆ ಎಂದು ದೇವಲದ ಪ್ರಕಟಣೆ ತಿಳಿಸಿದೆ.