ಜ.7-9 ನಡೆಯಲಿದ್ದ ಬಿಜೆಪಿ ಚಿಂತನ ವರ್ಗ ಮುಂದೂಡಿಕೆ- ನಳಿನ್ ಕುಮಾರ್

ರಾಜ್ಯ ಬಿಜೆಪಿ ವತಿಯಿಂದ ಜನವರಿ 7, 8 ಮತ್ತು 9 ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಚಿಂತನ ವರ್ಗವನ್ನು ಕೋವಿಡ್ ಮೂರನೇ ಅಲೆಯ ತೀವ್ರಗೊಳ್ಳುತ್ತಿರುವ ಕಾರಣ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

 

ರಾಜ್ಯದಲ್ಲಿ ಕೋವಿಡ್ ಅಲೆ ವೇಗವಾಗಿ ಹರಡುವುದನ್ನು ಗಮನಿಸಿ ರಾಜ್ಯ ಸರ್ಕಾರ ಕೋವಿಡ್‍ನ ನಿಯಂತ್ರಿಸಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಸರ್ಕಾರದ ಸುತ್ತೋಲೆಯನ್ನು ಗೌರವಿಸುವುದು ಮತ್ತು ಸರ್ಕಾರದ ಕಾನೂನು ಪಾಲನೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಚಿಂತನ ಸಭೆಯನ್ನು ಮುಂದೂಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Leave A Reply

Your email address will not be published.