ತರಗತಿಗೆ ಮೊಬೈಲ್ ತಂದ ವಿದ್ಯಾರ್ಥಿನಿಯನ್ನು ಕೊಠಡಿಯಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಶಿಕ್ಷಿಸಿದ ಶಿಕ್ಷಕಿ !!| ಅಮಾನವೀಯವಾಗಿ ಶಿಕ್ಷಿಸಿದ ಮುಖ್ಯಶಿಕ್ಷಕಿ ಸಸ್ಪೆಂಡ್
ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ. ಅದನ್ನು ತಿದ್ದಿ ಅವರನ್ನು ಒಳ್ಳೆ ದಾರಿಯಲ್ಲಿ ನಡೆಸುವುದು ಶಿಕ್ಷಕರ ಕರ್ತವ್ಯವಾಗಿರುತ್ತದೆ. ಆದರೆ ಇಲ್ಲೊಬ್ಬರು ಶಿಕ್ಷಕಿ ವಿದ್ಯಾರ್ಥಿಗೆ ಅಮಾನವೀಯವಾಗಿ ಶಿಕ್ಷಿಸಿ, ತಾನೇ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ. ಈಕೆಯ ಈ ದುರ್ನಡತೆಗೆ ಇಡೀ ಶಿಕ್ಷಕ ಸಮುದಾಯವೇ ತಲೆ ತಗ್ಗಿಸುವಂತೆ ಮಾಡಿದೆ.
ಹೌದು, ತರಗತಿಗೆ ಮೊಬೈಲ್ ತಂದ ವಿದ್ಯಾರ್ಥಿನಿಯನ್ನು ಮುಖ್ಯಶಿಕ್ಷಕಿ ಕೊಠಡಿಯಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಶಿಕ್ಷಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಎಂಟನೇ ತರಗತಿ ವಿದ್ಯಾರ್ಥಿನಿ, ತರಗತಿಗೆ ಮೊಬೈಲ್ ಮೊಬೈಲ್ ತಂದಿರುವುದು ಗಮನಿಸಿ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದೊಯ್ದು ಮುಖ್ಯ ಶಿಕ್ಷಕಿ ಸ್ನೇಹಲತಾ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಂಜೆ ಮನೆಗೆ ಮರಳಿದ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಪರಿಶೀಲನೆ ನಡೆಸಿದ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದು, ಮುಖ್ಯ ಶಿಕ್ಷಕಿ ಅಮಾನತು ಮಾಡಲು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದುಬಂದಿದೆ.