ಹಣದ ಜತೆಗೆ ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು- ಕೊನೆಗೂ ಸಿಕ್ಕಿ ಬಿದ್ದರು

ಅಧಿಕಾರಿಗಳು ಹಣದ ಜೊತೆಗೆ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಪ್ರಕರಣ ಕೇರಳದ ಆರ್‌ಟಿಒ ಚೆಕ್ ಪೋಸ್ಟ್‌ನಲ್ಲಿ ನಡೆದಿದೆ.

ಅಧಿಕಾರಿಗಳು ಲಾರಿಗಳ ಮೂಲಕ ಬರುತ್ತಿದ್ದ ಕುಂಬಳಕಾಯಿ, ಕಿತ್ತಳೆಯಂತಹ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಸ್ವೀಕರಿಸುತ್ತಿದ್ದರು. ಲಂಚವಾಗಿ ದೊ ರೆತ ಆ ತರಕಾರಿ ಮತ್ತು ಹಣ್ಣುಗಳನ್ನು ಆರ್‌ಟಿಒ ಚೆಕ್ ಪೋಸ್ಟ್‌ನಲ್ಲಿ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹಂಚಿಕೊಳ್ಳುತ್ತಿದ್ದರು.

ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಇದರಿಂದಾಗಿ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಅಧಿಕಾರಿಗಳ ಮತ್ತು ಸಿಬ್ಬಂದಿ ಚಲಾಕಿತನದ ಬಗ್ಗೆ ಸುಳಿವು ಪಡೆದುಕೊಂಡ ಡಿವೈಎಸ್‌ಪಿ ಶಬರಿದುಲೆಗೆ ತೆರಳುವಂತೆ ನಟಿಸಿ ಸ್ಥಳಕ್ಕೆ ಆಗಮಿಸಿದ್ದಾರೆ.

ಈ ವೇಳೆ ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ವಿಜಿಲೆನ್ಸ್ ಡಿವೈಎಸ್‌ಪಿ ಎಸ್. ಶಂಸುದ್ದೀನ್‌ ನೇತೃತ್ವದ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ ಸಂದರ್ಭದಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಜೊತೆಗೆ 69,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

Leave A Reply

Your email address will not be published.