RBI ನಲ್ಲಿ ಖಾಲಿ ಇರುವ 14 ಹುದ್ದೆಗಳಿಗೆ ಅರ್ಜಿ ಆಹ್ವಾನ |ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ ಹೀಗಿದೆ

ಭಾರತೀಯ ರಿಸರ್ವ್​ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

 

ಹುದ್ದೆಯ ಕುರಿತಾಗಿ ಮಾಹಿತಿ:

ಸಂಸ್ಥೆ : ಭಾರತೀಯ ರಿಸರ್ವ್​ ಬ್ಯಾಂಕ್
ಹುದ್ದೆಯ ಹೆಸರು: ಮ್ಯಾನೇಜರ್, ಲೈಬ್ರರಿಯನ್, ಆರ್ಕಿಟೆಕ್ಟ್​, ಕಾನೂನು ಅಧಿಕಾರಿ, ಫುಲ್​-ಟೈಂ ಕ್ಯುರೇಟರ್
ಒಟ್ಟು ಹುದ್ದೆಗಳು : 14
ಅರ್ಜಿ ಸಲ್ಲಿಕೆ ವಿಧಾನ : ಆನ್​​​ಲೈನ್​

ವಿದ್ಯಾರ್ಹತೆ:
ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ಉದ್ಯೋಗದ ಸ್ಥಳ:
ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ವೇತನ:
ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/02/2022

ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು.

Leave A Reply

Your email address will not be published.