ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರಿಂದ ಗೂಂಡಾಗಿರಿ!! ಅವಹೇಳನ ನಡೆಸಿದ್ದಾನೆಂದು ಆರೋಪಿಸಿ ಮುಸ್ಲಿಂ ಯುವಕನಿಗೆ ಗಂಭೀರ ಹಲ್ಲೆ

Share the Article

ಮುಸ್ಲಿಂ ಯುವಕನೋರ್ವನನ್ನು ಮನಬಂದಂತೆ ಥಳಿಸಿ, ಉಗುಳು ನೆಕ್ಕಿ ಜೈ ಶ್ರೀ ರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದ ಬಿಜೆಪಿಯ ಕಾರ್ಯಕರ್ತರು ಎನ್ನಲಾದ ಇಬ್ಬರನ್ನು ಜಾರ್ಖಂಡ್ ಬಂಧಿಸಿದ್ದು, ಉಳಿದವರ ಪತ್ತೆಗೆ ಬಲೆ ಬೀಸಿದ್ದಾರೆ.

ಪಂಜಾಬ್ ನಲ್ಲಿ ಪ್ರಧಾನಿ ಭದ್ರತೆಯಲ್ಲಿನ ಲೋಪವನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಮುಸ್ಲಿಂ ಯುವಕನೊಬ್ಬ ಪ್ರಧಾನಿ ಮೋದಿ ಹಾಗೂ ಜಾರ್ಖಂಡ್ ಬಿಜೆಪಿ ಮುಖ್ಯಸ್ಥರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದನ್ನು ಸಹಿಸದ ಕಾರ್ಯಕರ್ತರು ಕೋಪದಿಂದ ಆತನನ್ನು ಹಿಡಿದು ಥಳಿಸಿದ್ದಾರೆ ಎನ್ನಲಾಗಿದೆ.

ಘಟನೆಯನ್ನು ಕಣ್ಣಾರೆ ಕಂಡರೂ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸದ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಸದ್ಯ ಯುವಕನ ಮೇಲಿನ ಹಲ್ಲೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿದ್ದು,ಗಂಭೀರ ರೀತಿಯಲ್ಲಿ ಹಲ್ಲೆ ನಡೆಸಿದ್ದಲ್ಲದೇ,ಎಂಜಲು ನೆಕ್ಕಲು ಹೇಳಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ಯುವಕನ ಸಹೋದರ ನೀಡಿದ ದೂರನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿದ್ದು,ಬಂಧಿತರೆಲ್ಲರೂ ಬಿಜೆಪಿಯ ಕಾರ್ಯಕರ್ತರು ಹೌದೋ ಅಲ್ಲವೋ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ.ಒಟ್ಟಿನಲ್ಲಿ ಶಾಂತಿ ಕದಡಲು ಪ್ರಯತ್ನಿಸಿದ ಕಿಡಿಗೇಡಿಗಳ ಮಟ್ಟಹಾಕಲು ಪೊಲೀಸರು ಮುಂದಾಗಿದ್ದಾರೆ.

Leave A Reply