ಮಂಗಳೂರು:ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.
ಜಿಲ್ಲೆಯ ರೈತರು ಬೆಳೆಯುತ್ತಿರುವ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಸ್ಥಳೀಯ ರೈತರ ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಮನಗಂಡು ಸಚಿವರು ಉಡುಪಿ ಚಿಕ್ಕಮಂಗಳೂರು ಸಂಸದರಾದ ಕು.ಶೋಭಾ ಕರಂದ್ಲಾಜೆ ಮನವಿ ಹಿನ್ನಲೆಯಲ್ಲಿ ಕೇಂದ್ರ ಸರಕಾರಕ್ಕೆ ಹಾಗೂ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರಿಗೆ ಮನವಿ ಸಲ್ಲಿಸಿದ್ದರು.
ಈ ಮನವಿಯನ್ನು ಕೇಂದ್ರ ಸರಕಾರ ಗಣನೆಗೆ ಪಡೆದು ಕುಚ್ಚಲು ಅಕ್ಕಿ ನೀಡಲು ಅನುಮತಿ ನೀಡಿ ಆದೇಶ ಹೊರಡಿಸಲಾಗಿದೆ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ತಮ್ಮಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
You must log in to post a comment.