ವಾರಂತ್ಯದ ಕರ್ಫ್ಯೂ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆಯ ವೇಳೆ ದೇವರ ದರ್ಶನಕ್ಕೆ ಅವಕಾಶ

ಪುತ್ತೂರು: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಧನುರ್ಮಾಸ ಪೂಜೆಯ ಮಂಗಳಾರತಿ ಸಂದರ್ಭದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಈಗಿನ ಆದೇಶದಂತೆ ಬೆಳಗ್ಗಿನ ಜಾವ ಧನುರ್ಮಾಸ ಪೂಜೆಯ ಸಂದರ್ಭ ನಡೆಯುವ ಮಂಗಳಾರತಿಯಲ್ಲಿ ಶ್ರೀ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುವುದು.

ಭಕ್ತರು ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿ ಸರದಿ ಸಾಲಿನಲ್ಲಿ ಬಂದು ದೇವರ ದರ್ಶನ ಮಾಡುವಂತೆ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.

Leave A Reply