ಬನ್ನೇರುಘಟ್ಟ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ತುಮಕೂರು ನೈಸ್ -ಬನ್ನೇರುಘಟ್ಟ ರಸ್ತೆಯಲ್ಲಿ ಲಾರಿ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವಿವರ: ಬನ್ನೇರುಘಟ್ಟ ದಿಂದ ತುಮಕೂರು ಕಡೆಗೆ ಹೊರಟಿದ್ದ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಗಳಿದ್ದ ಕಾರಿಗೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮಹಿಳೆಯರು ಸಹಿತ ಪುರುಷರು ಸೇರಿ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದಕೂಡಲೇ ಕುಮಾರಸ್ವಾಮಿ ಲೇಔಟ್ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಅಪಘಾತ ನಡೆದ ಸ್ಥಳದಲ್ಲಿ ಸುಮಾರು ಎಂಟು ಕಿಮೀ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಅಪಘಾತ ನಡೆದ ಕೂಡಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Leave A Reply

Your email address will not be published.