ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!

ಕಾರವಾರ : ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತನ್ನ ಕೋಣೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಭಟ್ಕಳ ಬೆಳಕೆ ಪಂಚಾಯತ ವ್ಯಾಪ್ತಿಯ ಕಾನಮದ್ಲ ಬೊಮ್ಮಕೇರಿ ಕೊಚ್ಚರೆಯಲ್ಲಿ ನಡೆದಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕವನ ಮಂಜುನಾಥ ನಾಯ್ಕ, 17 ವರ್ಷ ಸಾವನ್ನಪ್ಪಿದ ಮೃತ ವಿದ್ಯಾರ್ಥಿನಿ.

ಈಕೆ ಪಕ್ಕದ ಉಡುಪಿ ಜಿಲ್ಲೆಯ ಬೈಂದೂರಿನ ಪಿ.ಯು ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಶುಕ್ರವಾರ ಮದ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ತನ್ನ ಚೂಡಿದಾರದ ವೇಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಕುರಿತು ಸುಬ್ಬ ನಾಯ್ಕ ಎಂಬವರು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave A Reply