ಕೊರಗಜ್ಜನ ಅವಹೇಳನ ಮಾಡಿದ ಮುಸ್ಲಿಂ ಮದುಮಗ – ನೇಮದಲ್ಲಿ ಕೊರಗಜ್ಜನ ನೀಡಿದ ನುಡಿಗಟ್ಟು : ಕೊರಗಜ್ಜ ಹೇಳಿದಾದರೂ ಏನು?

ವಿಟ್ಲ : ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗ ವೇಷ ಹಾಕಿ ಕುಣಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗಜ್ಜ ದೈವದ ಮೊರೆ ಹೋಗಿರುವ ಆಸ್ತಿಕರು ದೈವದ ಎದುರು ಪ್ರಾರ್ಥಿಸಿದ್ದಾರೆ.

ಪ್ರಾರ್ಥನೆ ಆಲಿಸಿದ ದೈವವು ಆತನನ್ನು ತಿಂಗಳೊಳಗೆ ಬೀದಿಯಲ್ಲಿ ಅಲೆಸುತ್ತೇನೆ ಎಂದು ನುಡಿ ನೀಡಿದೆ.

ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದ್ದು, ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿದ್ದು, ಸಾವಿರಾರು ಜನರಿಗೆ ಔತಣ ಕೂಟವನ್ನು ಏರ್ಪಡಿಸಿದ್ದರು. ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡು ವರ ಆಗಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Leave A Reply

Your email address will not be published.