ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ನಾನು ಆರೋಗ್ಯವಾಗಿದ್ದೇನೆ ಎಂದು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ – 19 ಗೆ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ವರದಿ ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ. ನಾನು ಹೋಮ್ ಕ್ವಾರಂಟೈನ್ ನಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಐಸೋಲೇಟ್ ಆಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಿನ್ನೆ ಟ್ವೀಟ್ ಮಾಡಿ ತಿಳಿಸಿದ್ದಾರೆ.