ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂಪಾ ನಿಧನ

ಬೆಂಗಳೂರು : ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಫ್ರೊ.ಚಂದ್ರಶೇಖರ ಪಾಟೀಲ ( ಚಂಪಾ) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರ ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಚಂಪಾ ಅವರಿಗೆ 85 ವರ್ಷ ವಯಸ್ಸಾಗಿತ್ತು

Leave A Reply

Your email address will not be published.