ಡಿಗ್ರಿ ಪಾಸಾದವರಿಗೆ ಇಸ್ರೋದಲ್ಲಿ ಉದ್ಯೋಗವಕಾಶ | ಬರೋಬ್ಬರಿ 526 ಹುದ್ದೆ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ
ISRO Recruitment 2023: ಇಸ್ರೋದಲ್ಲಿ ಕೆಲಸ ಮಾಡುವ ಆಸೆ ಇದೆಯೇ ? ಹಾಗಾದರೆ ಈ ಅವಕಾಶವನ್ನು ನೀವು ಉಪಯೋಗಿಸಿಕೊಳ್ಳಬೇಕು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation-ISRO) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಸಂಸ್ಥೆ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಹುದ್ದೆ: ಅಸಿಸ್ಟೆಂಟ್, ಜೂನಿಯರ್ ಪರ್ಸನಲ್ ಅಸಿಸ್ಟೆಂಟ್
ಒಟ್ಟು ಹುದ್ದೆ : 526
ವೇತನ : ತಿಂಗಳಿಗೆ 25,500
ಉದ್ಯೋಗದ ಸ್ಥಳ : ಭಾರತ
ಅಹ್ಮೆದಾಬಾದ್, ಬೆಂಗಳೂರು, ಹಾಸನ, ಹೈದೆರಾಬಾದ್, ಶ್ರೀಹರಿಕೋಟ, ತಿರುವನಂತಪುರಂ ವಲಯಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಿದೆ. ಒಟ್ಟು ಹುದ್ದೆಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ಹುದ್ದೆಗಳಿದ್ದು, 215 ಹುದ್ದೆಗಳನ್ನು ಇಲ್ಲಿ ಭರ್ತಿ ಮಾಡಲಾಗುತ್ತಿದೆ. ಈ ಮೊದಲು ಜನವರಿ 9, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿತ್ತು. ಈಗ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದ್ದು, ಜನವರಿ 16, 2023 ರವರೆಗೆ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಸಕ್ತರು ಈ ಕೂಡಲೇ ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 16/01/2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನ: 18/01/2023
ಹುದ್ದೆಗಳ ವಿವರ : ಅಸಿಸ್ಟೆಂಟ್- 339
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್- 153
ಮೇಲ್ದರ್ಜೆ ಡಿವಿಶನ್ ಕ್ಲರ್ಕ್-16
ಸ್ಟೆನೋಗ್ರಾಫರ್- 14
ಅಸಿಸ್ಟೆಂಟ್ (ಸ್ಪೇಸ್)- 3
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಸ್ಪೇಸ್)- 1
ವಿದ್ಯಾರ್ಹತೆ : ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ ತೇರ್ಗಡೆ ಹೊಂದಿರಬೇಕು
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್- ಡಿಪ್ಲೋಮಾ, ಪದವಿ
ಮೇಲ್ದರ್ಜೆ ಡಿವಿಶನ್ ಕ್ಲರ್ಕ್-ಪದವಿ
ಸ್ಟೆನೋಗ್ರಾಫರ್- ಡಿಪ್ಲೋಮಾ, ಪದವಿ
ಅಸಿಸ್ಟೆಂಟ್ (ಸ್ಪೇಸ್)- ಪದವಿ
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಸ್ಪೇಸ್)- ಡಿಪ್ಲೋಮಾ, ಪದವಿ
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 9, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳು-3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳು- 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಮಹಿಳಾ/SC/ST/PWD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ, ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 100 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ- ಆನ್ಲೈನ್/ ಆಫ್ಲೈನ್
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ