ಮಂಗಳೂರು : ಬೈಕಂಪಾಡಿ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಂ ಸೋರಿಕೆ, 26 ಮಂದಿ ಕಾರ್ಮಿಕರು ಅಸ್ವಸ್ಥ

ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಅಮೋನಿಯಂ ಸೋರಿಕೆ ಆಗಿದೆ. ಈ ಘಟನೆಯಲ್ಲಿ 20 ಕ್ಕೂ ಹೆಚ್ಚುಮಂದಿ ಅಸ್ವಸ್ಥರಾಗಿದ್ದಾರೆ.

ಎವರೆಸ್ಟ್ ಸೀ ಫುಡ್ಸ್ ಪ್ರೈ ಲಿಮಿಟೆಡ್ ಎಂಬ ಘಟಕದಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪಣಂಬೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಘಟನೆಯಲ್ಲಿ 26 ಜನ ಸಿಬ್ಬಂದಿಗಳು ಅಸ್ವಸ್ಥರಾಗಿದ್ದು, ಎಲ್ಲರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. 16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, 10 ಜನ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯಕ್ಕೆ ಫ್ಯಾಕ್ಟರಿಯಲ್ಲಿದ್ದ ಎಲ್ಲಾ ನೌಕರರನ್ನು ಹೊರಗೆ ಕಳುಹಿಸಲಾಗಿದೆ. ಸೋರಿಕೆ ಹೇಗೆ ಆಯಿತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ. ಹನ್ನೊಂದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಒಟ್ಟು 80 ಜನ ಕಾರ್ಮಿಕರು ಈ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

Leave A Reply

Your email address will not be published.