ಆಸ್ಪತ್ರೆ ಪ್ರವೇಶಿಸಲು ಕೂಡ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿದ ಜಿಲ್ಲಾಸ್ಪತ್ರೆ !!
ಆರೋಗ್ಯ ಸಚಿವರ ತವರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ದಾದಿಯರಿಗೆ ಕೊರೋನಾ ವಕ್ಕರಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ಸಹ ಕೋವಿಡ್ ಪರೀಕ್ಷೆ ಮಾಡಿಸಬೇಕೆಂಬ ಕಠಿಣ ಸೂಚನೆ ನೀಡಲಾಗಿದೆ.
ಆಸ್ಪತ್ರೆ ಪ್ರವೇಶಿಸಬೇಕಾದರೆ ರೋಗಿಗಳು, ಅವರ ಸಂಬಂಧಿಕರು ಕೋವಿಡ್ ಪರೀಕ್ಷೆ ಮಾಡಿಸುವುದು ಕಡ್ಡಾಯ. ಇಲ್ಲಿದಿದ್ದರೆ ಒಳಗಡೆಗೆ ಪ್ರವೇಶಾವಕಾಶ ಕಲ್ಪಿಸುವುದಿಲ್ಲ ಎಂದು ಮುಖ್ಯ ವೈದ್ಯಾಧಿಕಾರಿ ತಿಳಿಸಿದ್ದಾರೆ.
ಈ ನಿಯಮಕ್ಕೆ ರೋಗಿಗಳು ಹಾಗೂ ಸಂಬಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಹಾಗೂ ರೋಗಿಯ ಜೊತೆಯಲ್ಲಿ ಬರುವವರು ಸಹ ಆಸ್ಪತ್ರೆಯ ಓಳಗೆ ಹೋಗುವ ಮುನ್ನ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಿದೆ. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ರುದ್ರಮೂರ್ತಿ, ಸರ್ಕಾರದ ಆದೇಶದಂತೆ ನಿಯಮ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ಮೂವರು ವೈದ್ಯರು, ನಾಲ್ವರು ದಾದಿಯರು ಹಾಗೂ ಮೂವರು ಲ್ಯಾಬ್ ಟೆಕ್ನಿಷಿಯನ್ಸ್ ಸೇರಿದಂತೆ 10 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಕೊರೊನಾಗೆ ಕಡಿವಾಣ ಹಾಕಲು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.
ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರು ಆಸ್ಪತ್ರೆಯ ಓಳಗೆ ಬರುವ ಮುನ್ನವೇ ಅವರನ್ನು ತಡೆಯಲಾಗುತ್ತಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.