ಕಡಬ: ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

Share the Article

ಕಡಬ:ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯು ಕಡಬ ತಾಲೂಕಿನ ಕೊಡಿಂಬಾಳ ಬೆದ್ರಾಜೆ ಎಂಬಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಬೆದ್ರಾಜೆ ನಿವಾಸಿ ಕುಮಾರ ಎಂಬವರ ಪತ್ನಿ ಲಲಿತ(38) ಎಂದು ಗುರುತಿಸಲಾಗಿದೆ. ಮಹಿಳೆಯು ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಬೇರೆಲ್ಲಿಗೂ ಕೆಲಸಕ್ಕೆ ತೆರಳದೇ ಮನೆಯಲ್ಲಿಯೇ ಜಾನುವಾರು ಸಾಕಾಣೆ ಮಾಡುತ್ತಿದ್ದರು.

ಬುಧವಾರದಂದು ಪತಿ ನೆರೆಮನೆಗೆ ಕೆಲಸಕ್ಕೆ ತೆರಳಿದ್ದು,ಮಧ್ಯಾಹ್ನ ಮನೆಗೆ ಬಂದ ಸಂದರ್ಭದಲ್ಲಿ ಮನೆಯ ನಿರ್ಮಾಣಕ್ಕೆ ಉಪಯೋಗಿಸಿದ ಕಬ್ಬಿಣದ ಪೈಪ್ ಒಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.ಈ ಸಂಬಂಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು.

Leave A Reply