ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ ಫೆಬ್ರವರಿ 13
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು: 88
ಹುದ್ದೆಗಳು: ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಗಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಆಯ್ಕೆಗೆ ಪರಿಗಣಿಸುವುದಿಲ್ಲ.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆ, ಗರಿಷ್ಠ 9ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
9ನೇ ತರಗತಿ ತೇರ್ಗಡೆ ಹೊಂದಿ ಹೆಚ್ಚಿನ ವಿದ್ಯಾರ್ಹತೆಯನ್ನು ಪಡೆದಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆದರೆ ಆಯ್ಕೆ ಸಮಯದಲ್ಲಿ 9ನೇ ತರಗತಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು.
(ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು)
ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ
(ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ)
ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೋಢಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಕರ್ತವ್ಯ ಸ್ಥಳ: ಶಿವಮೊಗ್ಗ
ಅರ್ಜಿ ಸಲ್ಲಿಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 13, 2022
ಅರ್ಜಿ ಸಲ್ಲಿಕೆ:
https://bityl.co/AVda
ಅರ್ಜಿ ಶುಲ್ಕ: ಇಲ್ಲ
ಹೆಚ್ಚಿನ ಮಾಹಿತಿಗಾಗಿ:
https://ggle.io/4YfW