ವಿಷಾಹಾರ ಸೇವಿಸಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ , ಸ್ಥಳಕ್ಕೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಿಢೀರ್ ಭೇಟಿ

ದಾವಣಗೆರೆ : ಜಿಲ್ಲೆಯ ಇಂದಿರ ಗಾಂಧಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿದ ಪರಿಣಾಮ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ‌.

Ad Widget

50 ಕ್ಕೂ ಹೆಚ್ಚು ಮಕ್ಕಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ad Widget . . Ad Widget . Ad Widget .
Ad Widget

ಶುಕ್ರವಾರ ರಾತ್ರಿ ಊಟ ಸೇವಿಸಿದ್ದ ವಿದ್ಯಾರ್ಥಿನಿಯರು ಸುಸ್ತಾಗಿದ್ದರು. ಕೂಡಲೇ ವಾಹನ ವ್ಯವಸ್ಥೆ ಮಾಡಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆರೋಗ್ಯವಾಗಿದ್ದಾರೆ.

Ad Widget
Ad Widget Ad Widget

ಈ ವಿಷಯ ತಿಳಿಯುತ್ತಿದ್ದಂತೆ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಬೆಂಗಳೂರಿನಿಂದ ನೇರವಾಗಿ ವಸತಿ ಶಾಲೆ ಭೇಟಿ ನೀಡಿದರು‌. ಮಕ್ಕಳಿಗೆ ಧೈರ್ಯ ಹೇಳಿ ನಂತರ ಆಸ್ಪತ್ರೆಗೆ ಭೇಟಿ ನೀಡಿ ಆತಂಕಪಡಬೇಡಿ ಎಂದಿದ್ದಾರೆ.

ಶಾಸಕ ರೇಣುಕಾಚಾರ್ಯ ಆಸ್ಪತ್ರೆಯಲ್ಲೇ ಇದ್ದು ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.

Leave a Reply

error: Content is protected !!
Scroll to Top
%d bloggers like this: