ತುರ್ತು ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ಆಸ್ಪತ್ರೆಗೆ ಪ್ರವೇಶ !! | ಕಠಿಣ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Share the Article

ಆಸ್ಪತ್ರೆಗಳಲ್ಲಿ ಗುಂಪು ಸೇರುವುದನ್ನು ತಪ್ಪಿಸಲು ಹಾಗೂ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ಜ್ವರ ಮತ್ತು ತುರ್ತು ಆರೋಗ್ಯ ಚಿಕಿತ್ಸೆಯ ಅಗತ್ಯವಿರುವ ರೋಗಿಗಳು ಮಾತ್ರ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ಭೇಟಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಸಣ್ಣ ಪ್ರಮಾಣದ ಅನಾರೋಗ್ಯದಿಂದ ಬಳಲುತ್ತಿರುವ ಮತ್ತು ಹೊರರೋಗಿ ಚಿಕಿತ್ಸೆಯ ಅಗತ್ಯ ಇರುವ ರೋಗಿಗಳು ಸೇರಿದಂತೆ ದಂತ ಚಿಕಿತ್ಸೆಯ ಅಗತ್ಯವಿರುವವರು ಎರಡು ವಾರದವರೆಗೆ ಆಸ್ಪತ್ರೆಗಳಿಗೆ ಭೇಟಿ ನೀಡಬಾರದು ಎಂದು ಸೂಚಿಸಲಾಗಿದೆ.

ಗುಂಪು ಸೇರುವುದನ್ನು ತಪ್ಪಿಸಲು ಹಾಗೂ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ಖಾಸಗಿ ಆಸ್ಪತ್ರೆಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply