ಮಹಾನ್ ಮಾನವತಾವಾದಿ, ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳಿಗೆ ಅನ್ಯಾಯ!! ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ
ರಾಷ್ಟ್ರಪಿತ ಮಹಾತ್ಮ ಗಾಂಧೀ, ಜ್ಞಾನಪೀಠ ರವೀಂದ್ರನಾಥ್ ಟಾಗೋರ್, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಗೌರವಿಸಿದ್ದ ಅವಧೂತ, ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಅವಕಾಶ ತಿರಸ್ಕರಿಸಿದ್ದು ಸದ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ವಿಶ್ವಸಂತ, ಮಹಾನ್ ಮಾನವತಾವಾದಿ ಅವಧೂತ ನಾರಾಯಣ ಗುರುಗಳಿಗೆ ಆದ ಅನ್ಯಾಯದ ಬಗ್ಗೆ ಸಾಂದೀಪನಿ ಸಾಧನಾಶ್ರಮ ಕೇಮಾರು ಇಲ್ಲಿಯ ಶ್ರೀಶ್ರೀ ಈಶ ವಿಠಲದಾಸ ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಶತಮಾನದ ಹಿಂದಿನಿಂದಲೂ ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು, ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮಹಾನ್ ಸಂತರ ಸ್ತಬ್ದ ಚಿತ್ರಕ್ಕೆ ಅನುಮತಿ ನೀಡಬೇಕು, ಈಗಾಗಲೇ ಅನುಮತಿ ತಿರಸ್ಕರಿಸಿದ ಸಮಿತಿಯು ಕೂಡಲೇ ಈ ಬಗ್ಗೆ ಪುನರ್ ವಿಮರ್ಶಿಸಿ ಕ್ರಮ ಕೈಗೊಳ್ಳಬೇಕೆಂದು ಶ್ರೀಗಳು ಒತ್ತಾಯಿಸಿದ್ದಾರೆ.
ವಿವಾದಕ್ಕೆ ಕಾರಣವೇನು!?
ಪ್ರತೀ ಬಾರಿಯೂ ರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ದ ಚಿತ್ರಗಳು ಪ್ರದರ್ಶನಗೊಳುತ್ತಿದ್ದೂ, ಈ ಬಾರಿ ಕೇರಳ ರಾಜ್ಯ ಕಳುಹಿಸಿದ್ದ ಚಿತ್ರವು ತೀರಸ್ಕೃತಗೊಂಡಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಕೇರಳದ ಸ್ತಬ್ಧ ಚಿತ್ರದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯದೊಂದಿಗೆ ಜಟಾಯು ಪಕ್ಷಿ ಹಾಗೂ ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳ ಪ್ರತಿಮೆಯನ್ನು ಸಿದ್ಧಪಡಿಸಲಾಗಿತ್ತು. ಈ ಬಗ್ಗೆ ಪ್ರಶ್ನಿಸಿದ ಕೇಂದ್ರವು, ನಾರಾಯಣ ಗುರುಗಳ ಬದಲಾಗಿ ಶಂಕರಾಚಾರ್ಯರ ಪ್ರತಿಮೆಯ ಬಳಕೆಗೆ ಸೂಚಿಸಿತ್ತು. ಇದಾದ ಬಳಿಕ ಕೇರಳದ ಸ್ತಬ್ಧ ಚಿತ್ರಕ್ಕೆ ಅನುಮತಿ ತಿರಸ್ಕರಿಸಲಾಗಿದೆ.