KAPL ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು,ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ :ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​
ಹುದ್ದೆಯ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು: 01
ಉದ್ಯೋಗದ ಸ್ಥಳ : ಬೆಂಗಳೂರು
ವೇತನ ಮಾಸಿಕ : ₹ 61,680
ಅರ್ಜಿ ಸಲ್ಲಿಸುವ ವಿಧಾನ: ಆಫ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ :13/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/01/2022

ವಿದ್ಯಾರ್ಹತೆ:
ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ ಬಿ.ಫಾರ್ಮಾ, ಎಂ.ಫಾರ್ಮಾ ಪೂರ್ಣಗೊಳಿಸಿರಬೇಕು.

ಅನುಭವ:
ಅಭ್ಯರ್ಥಿಗಳು ಹೆಸರಾಂತ ಔಷಧ ತಯಾರಿಕಾ ಕಂಪನಿಯಲ್ಲಿ ಕನಿಷ್ಠ 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅನುಭವ ಹೊಂದಿರಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ kaplindia.com ಗೆ ಭೇಟಿ ನೀಡಬಹುದು.

Leave A Reply

Your email address will not be published.