ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ |ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಪಾಸ್ ಆಗಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸೆಪ್ಟೆಂಬರ್, 5, 2021 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇಲಾಖೆಯು ಸದ್ಯದಲ್ಲೇ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಘೋಷಿಸುವುದರಿಂದ ಇಂದೇ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ:
ಹುದ್ದೆ ಹೆಸರು: ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್

ಹುದ್ದೆಗಳ ಸಂಖ್ಯೆ: 6406
ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ – 2579
ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ- 3827

ವಯೋಮಾನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಕರ್ನಾಟಕ ನೇಮಕಾತಿ ಮಾನದಂಡಗಳ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು ಇರಬೇಕು.

ವಿದ್ಯಾರ್ಹತೆ: ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತೀರ್ಣರಾಗಿರಬೇಕು.

ಉದ್ಯೋಗ ಸ್ಥಳ: ಕರ್ನಾಟಕ

ವೇತನ ಶ್ರೇಣಿ: ತಿಂಗಳಿಗೆ 21,400-42,000 ರೂಪಾಯಿ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್ ಸೈಟ್ rdpr.karnataka.gov.in ಗೆ ಸಂಪರ್ಕಿಸಿರಿ.

Leave A Reply

Your email address will not be published.