ಮದುವೆಯ ಮರುದಿನ ತನ್ನ ಸಲಿಂಗ ಸ್ನೇಹಿತೆಯ ಜೊತೆ ಎಸ್ಕೇಪ್ ಆದ ವಧು!!

Share the Article

ಇತ್ತೀಚಿಗೆ ದೇಶದಲ್ಲಿ ಸಲಿಂಗ ಸಂಗಾತಿಗಳ ಕುರಿತ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಹಾಗೆಯೇ ಇಲ್ಲಿ ಒಲ್ಲದ ಮನಸ್ಸಿನಿಂದ ಮನೆಯವರ ಒತ್ತಾಯಕ್ಕೆ ಮದುವೆ ಮಾಡಿಕೊಂಡ ಯುವತಿ ಮರುದಿನವೇ ತನ್ನ ಸಲಿಂಗ ಸಂಗಾತಿ ಜೊತೆ ಓಡಿ ಹೋಗಿರುವ ಘಟನೆ ಜಾರ್ಖಂಡ್ ನ ಧನ್ಬಾದ್‍ನಲ್ಲಿ ನಡೆದಿದೆ.

ಕುಟುಂಬಸ್ಥರು ಬಲವಂತವಾಗಿ ಯುವತಿಯ ಮದುವೆ ಮಾಡಿದ್ದಾರೆ. ಆದರೆ ಆಕೆ ಮರುದಿನವೇ ಸಲಿಂಗ ಸಂಗಾತಿ ಜೊತೆ ಓಡಿ ಹೋಗಿದ್ದಾಳೆ. ಅದಲ್ಲದೆ ಈ ಜೋಡಿ ತಮಗೆ ರಕ್ಷಣೆ ನೀಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಯುವತಿ ವಿವಾಹ ಮಾಡಿಕೊಳ್ಳುವುದಕ್ಕೂ ಮುಂಚಿತವಾಗಿ ಸಲಿಂಗ ಸಂಗಾತಿ ಜೊತೆ ವಾಸವಾಗಿದ್ದಳು. ಇದನ್ನರಿತ ಕುಟುಂಬಸ್ಥರು ಯುವಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಿದ್ದಾರೆ. ಈ ಬೆನ್ನಲ್ಲೇ ಆಕೆ ಮದುವೆಯಾದ ಮರುದಿನವೇ ಸಲಿಂಗ ಸಂಗಾತಿ ಜೊತೆಗೆ ಎಸ್ಕೇಪ್ ಆಗಿದ್ದಾಳೆ. ಇಬ್ಬರೂ ಕಳೆದ ಅನೇಕ ವರ್ಷಗಳಿಂದ ಪರಿಚಯವಾಗಿದ್ದು, ಒಬ್ಬರನ್ನೊಬ್ಬರು ಪ್ರೀತಿಸಲು ಶುರು ಮಾಡಿದ್ದರಂತೆ.

ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಪ್ರಕರಣ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್ ಠಾಣೆಯಲ್ಲಿ ಯುವತಿ ಗಂಡನೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ, ಸಲಿಂಗ ಸಂಗಾತಿ ಜೊತೆ ಇರುವುದಾಗಿ ಹೇಳಿದ್ದಾಳೆ.

Leave A Reply