ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿ ಶಂಕರಾಚಾರ್ಯರ ಸ್ತಬ್ಧ ಚಿತ್ರ ಕಳಿಸುವಂತೆ ಕೇಂದ್ರ ಸೂಚಿಸಿದೆ ಎನ್ನುವುದು ಸುಳ್ಳು-ಜೋಶಿ

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ‘ ಗಣರಾಜ್ಯೋತ್ಸವ ಅಂಗವಾಗಿ ಕೇರಳ ರಾಜ್ಯ ಕಳಿಸಿದ್ದ ನಾರಾಯಣ ಗುರು ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು ‘ ಎಂದು ಹೇಳಿದ್ದಾರೆ.

 

ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ದೇಶದಲ್ಲಿ 36 ರಾಜ್ಯಗಳಿವೆ. ಪ್ರತಿವರ್ಷ ಗಣರಾಜ್ಯೋತ್ಸವಕ್ಕೆ 12 ಸ್ತಬ್ಧ ಚಿತ್ರಗಳನ್ನು ಆಯ್ಕೆ ಮಾಡಲಾಗುತ್ತದೆ. ಇದಕ್ಕೆ ಲಿಖಿತವಾದ ಯಾವುದೇ ನಿಯಮಗಳಿಲ್ಲ ‘ ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಮೂರು ವರ್ಷಕ್ಕೊಮ್ಮೆ ಪ್ರತಿ ರಾಜ್ಯದ ಸ್ತಬ್ಧಚಿತ್ರಗಳು ಆಯ್ಕೆಯಾಗುವುದು ಅಲಿಖಿತ ನಿಯಮ‌. 2018 ಮತ್ತು 2021 ರಲ್ಲಿ ಕೇರಳದ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು. ಹಾಗಾಗಿ ಈ ಸಲ ಬೇರೆ ರಾಜ್ಯಗಳಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಆರಂಭಿಸಿದ ಈ ನಿಯಮ ಇಂದಿಗೂ ಪಾಲಿಸಲಾಗುತ್ತಿದೆ’ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವಿದ್ದಾಗ ಐದೂ ವರ್ಷ ರಾಜ್ಯದ ಸ್ತಬ್ಧ ಚಿತ್ರಗಳು ರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಿರಲಿಲ್ಲವೇ ? ಎಂಬ ಸುದ್ದಿಗಾರರು ಕೇಳಿದ ಪ್ರಶ್ನೆಗೆ ‘ ವಿಶೇಷ ಸಂದರ್ಭದಲ್ಲಿ ಮಾತ್ರ ಈ ಅವಕಾಶ ನೀಡಲಾಗುತ್ತದೆ ‘ ಎಂದು ಹೇಳಿಕೆ ನೀಡಿದ್ದಾರೆ.

Leave A Reply

Your email address will not be published.