ವಿದ್ಯಾರ್ಥಿಗಳೇ ಗಮನಿಸಿ : ಪ್ರಥಮ, ದ್ವಿತೀಯ ಪಿಯುಸಿ ಪಠ್ಯಕ್ರಮ ಕಡಿತ, ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಬಗ್ಗೆ ಮಹತ್ವದ ಮಾಹಿತಿ
ಬೆಂಗಳೂರು : 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಈ ಕುರಿತಂತೆ, 2021-22 ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಮಾರ್ಪಾಡು ಮಾಡಲಾಗಿದೆ ಎಂದು ಹೇಳಲಾಗಿದೆ.
ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ 17-02-2022 ರಿಂದ 25-03-2022 ರವರೆಗೆ ನಡೆಸಲು ನಿಗದಿಪಡಿಸಲಾಗಿದೆ. ಪೂರ್ವ ಸಿದ್ಧತಾ ಪರೀಕ್ಷೆಯನ್ನು ದಿನಾಂಕ 14-03-2022 ರಿಂದ 25-03-2022 ರವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ನಿಗದಿಪಡಿಸಲಾಗಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 16-04-2022 ರಿಂದ 04-05-2022 ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಬಗ್ಗೆ ಆಕ್ಷೇಪಣೆ ಸಲ್ಲಿಸೋದಕ್ಕೆ 18-01-2022 ರಿಂದ 01-02-2022 ರವರೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಇಮೇಲ್ ಗೆ ಕಳುಹಿಸುವಂತೆ ತಿಳಿಸಲಾಗಿದೆ.
ಭಾಷಾಯ ವಿಷಯಗಳಲ್ಲಿ 2020-21 ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದು, ಶೇ.30 ರಷ್ಟು ಪಠ್ಯಕ್ರಮಗಳನ್ನು 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30 ರಷ್ಟು ಪಠ್ಯಕ್ರಮಗಳನ್ನು ಕಡಿತಗಿಳಿಸಲಾಗಿದ್ದು, ಶೇ.70 ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುವುದು.
2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲ.
ಶೇ.100 ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳು ನಡೆಯಲಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆಯ್ಕೆ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸೋ ಅವಕಾಶ ಕಲ್ಪಿಸಲಾಗಿದೆ.