ಬಾಂಗ್ಲಾ ನಟಿ ನಾಪತ್ತೆ ಪ್ರಕರಣ : ಸೇತುವೆಯ ಬಳಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ

ಬಾಂಗ್ಲಾದೇಶದ ಢಾಕಾದಲ್ಲಿ ಕೆಲ‌ದಿನಗಳ‌ ಹಿಂದೆ ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಲೀಮುಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ( ಎಸ್ ಎಸ್ ಎಂಸಿಎಚ್) ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.


Ad Widget

Ad Widget

Ad Widget

45 ವರ್ಷದ ನಟಿ 1998 ರಲ್ಲಿ ‘ ಬರ್ತ್ ಮನ್’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶ ಮಾಡಿದ್ದರು. ಒಟ್ಟು 25 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಬಾಂಗ್ಲಾದೇಶ ಚಲನಚಿತ್ರ ಕಲಾವಿದರ ಸಂಘದ ಸಹಾಯಕ ಸದಸ್ಯ ಕೂಡಾ ಆಗಿದ್ದರು ಈ ನಟಿ.

ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಮಾದರಿ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಹೊರತೆಗೆದಿದ್ದಾರೆ.

Leave a Reply

error: Content is protected !!
Scroll to Top
%d bloggers like this: