ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ನಲ್ಲಿ ಉದ್ಯೋಗ : ಅರ್ಜಿ ಆಹ್ವಾನ, ಮಾಸಿಕ 30 ಸಾವಿರದಿಂದ 1,20,000 ದವರೆಗೆ ವೇತನ

ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ( ಬಿಪಿಸಿಎಲ್ ) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : ಜ್ಯೂನಿಯರ್ ಎಕ್ಸಿಕ್ಯೂಟಿವ್

ಭಾರತೀಯ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 22, ಜನವರಿ, 2022

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 07, 2022

ವಿದ್ಯಾರ್ಹತೆ : ಪದವಿ, ಬಿಟೆಕ್/ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಅಭ್ಯರ್ಥಿಗಳು 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.

ವಯೋಮಿತಿ : ಫೆಬ್ರವರಿ 1, 2022 ರ ಅನ್ವಯ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/- ರಿಂದ 1,20,000/- ರೂ.ಗಳ ವರೆಗೆ ವೇತನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಕಂಪ್ಯೂಟರ್ ಪರೀಕ್ಷೆ , ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ : ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕಾರಿಗಳು ವೆಬ್‌ಸೈಟ್‌ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಿ. ತದನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 22, 2022 ರಿಂದ ಫೆ.07, 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ‌

Leave A Reply

Your email address will not be published.