ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಣ್ಣನ ಮಗನ ಹತ್ಯೆ ಯತ್ನ !

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಣ್ಣನ ಮಗ ಹಾಗೂ ಕಾಂಗ್ರೆಸ್ ಮುಖಂಡನ ಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

 

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮ ಸಮೀಪದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡ ಎಂ.ಎಸ್. ಗುರುಚರಣ್ ಹತ್ಯೆಗೆ ದುಷ್ಕರ್ಮಿಗಳು ಯತ್ನಿಸಿದ್ದು, ಪ್ರಾಣಾಪಾಯದಿಂದ ಗುರುಚರಣ್ ಪಾರಾಗಿದ್ದಾರೆ.

ಪಲ್ಸರ್ ಬೈಕಿನಲ್ಲಿ ಬಂದಿದ್ದ ಮೂವರು ಪಾನಮತ್ತರಾಗಿದ್ದು, ಗುರುಚರಣ್ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಾರೆ.

ಗುರು ಚರಣ್ ಅವರು 2023 ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1 Comment
  1. Naveen p says

    Ssupar news reports

Leave A Reply

Your email address will not be published.