5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಬೇಡ – ಕೇಂದ್ರದಿಂದ ಮಹತ್ವದ ಸೂಚನೆ
ದೆಹಲಿ : ಸರಕಾರ ಮಕ್ಕಳಿಗಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ. 5 ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬಳಸಬೇಡಿ ಎಂದು ಕೇಂದ್ರ ಹೇಳಿದೆ.
6 ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮಾರ್ಥ್ಯಕ್ಕೆ ಪಾಲಕರು ನಿಗಾದಲ್ಲಿ ಮಾಸ್ಕ್ ಹಾಕಬೇಕು. 12 ರಿಂದ 18 ವರ್ಷದ ಮಕ್ಕಳು ದೊಡ್ಡವರಂತೆ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ.
ಕೊರೊನಾ, ಓಮಿಕ್ರಾನ್ ಸೋಂಕು ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ರೋಗ ನಿರೋಧಕ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಸುವಂತಿಲ್ಲ ಎಂದು ಕೇಂದ್ರ ಸರಕಾರ ಸೂಚಿಸಿದೆ.
ಸ್ಟಿರಾಯ್ಡ್ ಬಳಸುವಿಕೆ 10 ರಿಂದ 14 ದಿನಕ್ಕೆ ಮಾತ್ರ. ಮಕ್ಕಳಿಗೆ ಹಾಗೂ ಅಪ್ರಾಪ್ತರಿಗೆ ಕೋವಿಡ್ ನಿರ್ವಹಣೆ ಮಾರ್ಗಸೂಚಿಯನ್ನು ಸರಕಾರ ಬಿಡುಗಡೆ ಮಾಡಿದೆ.