ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಮಹಿಳಾ ಅಭ್ಯರ್ಥಿಗಳಿಗೆ ವೃತ್ತಿ ತರಬೇತಿ, ಮಾಸಿಕ ರೂ.15,000/- ಸ್ಟೈಫಂಡ್
ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಸಕ್ತ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
15 ಜನ ಮಹಿಳಾ ಅಭ್ಯರ್ಥಿಗಳನ್ನು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಪ್ರತಿ ಮಾಸಿಕ 15 ಸಾವಿರ ರೂ.ಗಳ ಸ್ಟೈಫಂಡ್ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು.
ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ( ಪಿಡಿಎಫ್) ಸ್ಕ್ಯಾನ್ ಮಾಡಿ ಇ ಮೇಲ್ ವಿಳಾಸ wbkma2022@gmail.com ಮೂಲಕ ಅಥವಾ ಅಂಚೆ ಮೂಲಕ ಜನವರಿ 29 ರೊಳಗಾಗಿ ತಲುಪುವಂತೆ ಕಳುಹಿಸಬೇಕು. ಅನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರಕಾರಿ ಇಲಾಖೆ, ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತವರು ಅರ್ಜಿ ಸಲ್ಲಿಸುವಂತಿಲ್ಲ.
ಸರಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಹಾಕಿದ್ದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ : 080-22860164 ಗೆ ಸಂಪರ್ಕಿಸಬಹುದು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಸಂಪರ್ಕಿಸಬಹುದು.