ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ಎಂಬವರು ಪ.ಪಂ.ಮಾಜಿ ಸದಸ್ಯನ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸದಸ್ಯ ಶ್ರೀ ಕೃಷ್ಣ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.
ಶ್ರೀ ಕೃಷ್ಣ ಎಂಬಾತ ಪಟ್ಟಣ ಪಂಚಾಯತ್ ಕಛೇರಿಗೆ ಆಗಮಿಸಿ ರಾಜೇಶನ ಜಾತಿ ನಿಂದನೆ ಮಾಡಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ದೂರು ನೀಡಲಾಗಿತ್ತು.
ಮಂಗಳಪದವಿನ ವ್ಯಕ್ತಿಯೊಬ್ಬರಿಗೆ ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ರಾಜೇಶ್ ಅವರ ಮೇಲೆ ಲಂಚದ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದರು.
ರಾಜೇಶ್ ಕೆಲವರಿಗೆ ವಾಟ್ಸಾಪ್ ನಲ್ಲಿ ವಾಟ್ಸ್ ಮೆಸೇಜ್ ಕಳುಹಿಸಿದ್ದು, ನನ್ನ ಬಗ್ಗೆ ಸುಳ್ಳು ಆರೋಪ ಮಾಡಿದ್ದು, ಇದರಿಂದ ಮಾನಸಿಕವಾಗಿ ಮನನೊಂದಿರುತ್ತೇನೆ ಎಂದು ಬರೆದುಕೊಂಡಿದ್ದರು.