ಕಾಲೇಜು ಸಹಪಾಠಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಸ್ನೇಹಿತ | ಆತನ ಗೆಳೆಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರು

Share the Article

ಕಾಲೇಜು ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಮಾಡಿದ ಆರೋಪದ ಮೇಲೆ ಆರು ಮಂದಿ ಯುವಕರನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 17 ವರ್ಷ ವಯಸ್ಸಿನ ವಿದ್ಯಾರ್ಥಿನಿಯನ್ನು ಈ ಹಿಂದೆ ಅವರ ಮನೆಗೆ ಕೆಲಸಕ್ಕೆ ಹೋಗುತ್ತಿದ್ದ ಯುವಕ ಪರಿಚಯಿಸಿಕೊಂಡಿದ್ದ. ಆಕೆಯೊಂದಿಗೆ ಸಲುಗೆಯಿಂದಿದ್ದ ಯುವಕ ಮತ್ತು ಆತನ ಸ್ನೇಹಿತ ಜನವರಿ 15 ರಂದು ಮಧ್ಯಾಹ್ನ ಹೊಸನಗರ ಬಸ್ ನಿಲ್ದಾಣದ ಬಳಿ ನಿಂತಿದ್ದ ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಕಾರ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಸ್ನೇಹಿತನ ರೂಮ್ ಗೆ ಕರೆದುಕೊಂಡು ಹೋದ ಯುವಕ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಈ ದೃಶ್ಯವನ್ನು ಸ್ನೇಹಿತರಿಗೆ ಹೇಳಿ ವಿಡಿಯೋ ಮಾಡಿಸಿಕೊಂಡಿದ್ದಾನೆ. ಸ್ನೇಹಿತರು ವಾಟ್ಸಾಪ್ ಮೂಲಕ ಹಂಚಿಕೊಂಡಿದ್ದು, ಒಬ್ಬರಿಂದ ಒಬ್ಬರಿಗೆ ವಿಡಿಯೋ ಹರಿದಾಡಿದ್ದು, ಶುಕ್ರವಾರ ವಿದ್ಯಾರ್ಥಿನಿಯಿಂದ ಹೇಳಿಕೆ ಪಡೆದ ಪೊಲೀಸರು ಕಲಂ 363, 376(2)(f), 506 R/w 34 IPC ಮತ್ತು ಕಲಂ 04 POCSO ಹಾಗೂ 66(e), 67(b) IT ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊಸನಗರ ಪಿಎಸ್ಐ, ಎಎಸ್ಐ ಮತ್ತು ಸಿಬ್ಬಂದಿ ತನಿಖೆ ಕೈಗೊಂಡು ಒಂದು ಗಂಟೆಯೊಳಗೆ 6 ಯುವಕರನ್ನು ಬಂಧಿಸಿದ್ದಾರೆನ್ನಲಾಗಿದೆ.

Leave A Reply