ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟದ್ದು – ಉನ್ನತ ಶಿಕ್ಷಣ ಇಲಾಖೆ ಸೂಚನೆ
ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಷಯ ವಿದ್ಯಾರ್ಥಿಗಳಿಗೆ ಬಿಟ್ಟದ್ದು. ಒತ್ತಡ ಬೇಡ. ಆಯ್ಕೆ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚಿಸಿದೆ.
ಕನ್ನಡವನ್ನು ಆಯ್ಕೆ ಮಾಡಲು ಇಷ್ಟವಿಲ್ಲದ ವಿದ್ಯಾರ್ಥಿಗಳಿಗೆ ಒತ್ತಾಯ ಮಾಡಕೂಡದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಈ ವಿಚಾರದ ಬಗ್ಗೆ ಹೈಕೋರ್ಟ್ ನಿಂದ ಅಂತಿಮ ಆದೇಶ ಬರುವವರೆಗೂ ಮಧ್ಯಂತರ ಆದೇಶವನ್ನು ಪಾಲಿಸಲು ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಸೂಚಿಸಿದ್ದಾರೆ.