8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಈ ದುಷ್ಕೃತ್ಯ ಮಾಡಿದ ಪಕ್ಕದ ಮನೆ ಯುವಕ

ಇತ್ತೀಚೆಗೆ ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಲೇ ಇದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಈ ಕೃತ್ಯಕ್ಕೆ ಕಠಿಣ ಶಿಕ್ಷೆ ಕೊಡುತ್ತೆ ಎಂದು ಗೊತ್ತಿದ್ದರೂ ಈ ಅತ್ಯಾಚಾರ ಪ್ರಕರಣ ಕಮ್ಮಿಯಾಗುತ್ತಿಲ್ಲ.

ಇದಕ್ಕೆ ಸಂಬಂಧಿಸಿದಂತೆ ನಿ‌ನ್ನೆ ಬೆಂಗಳೂರಿನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ನಡೆದಿದೆ‌. ನಗರದ ನಂದಿನಿ ಲೇ ಔಟ್ ಬಳಿ ಈ ಘಟನೆ ನಡೆದಿದೆ.


Ad Widget

Ad Widget

Ad Widget

ಮನೆಯಲ್ಲಿ ಯಾರೂ ಇಲ್ಲದಿರುವಾಗ,
ನಿನ್ನೆ ಸಾಯಂಕಾಲ ಪಕ್ಕದ ಮನೆಯ ಯುವಕ ಬಂದು ಈ ಕೃತ್ಯ ಎಸಗಿದ್ದಾನೆ. ಬಾಲಕಿಯ ತಾಯಿ ಕೆಲಸಕ್ಕೆ ಹೋದವರು ಮನೆಗೆ ವಾಪಾಸ್ಸಾಗಿರಲಿಲ್ಲ. ಮನೆಯಲ್ಲಿ ಯಾರೂ ಇಲ್ಲದ್ದನ್ನು ನೋಡಿಕೊಂಡು ಹೊಂಚುಹಾಕುತ್ತಿದ್ದ ಯುವಕ ಈ ದುಷ್ಕೃತ್ಯ ಮಾಡಿದ್ದಾನೆ.

ಬಾಲಕಿ ಮತ್ತು ಆರೋಪಿಯ ವೈದ್ಯಕೀಯ ಪರೀಕ್ಷೆಯನ್ನು ಪೊಲೀಸರು ನಡೆಸಲಿದ್ದಾರೆ.

ಈತನನ್ನು ಈಗಾಗಲೇ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

error: Content is protected !!
Scroll to Top
%d bloggers like this: