SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ |ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ-ಸಚಿವ ಬಿ.ಸಿ.ನಾಗೇಶ್
ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು,ಪರೀಕ್ಷೆ ಕಡ್ಡಾಯವಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಹಾಜರಾಗುತ್ತಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.
ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ. ಹೀಗಾಗಿ ಈ ವರ್ಷ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.