ಪುತ್ತೂರು: ರೋಗಿಯನ್ನು ಹೊತ್ತು ಪುತ್ತೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಪುತ್ತೂರು: ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮಧ್ಯರಾತ್ರಿ ಕುಂಬ್ರ ಕಲ್ಲರ್ಪೆಯಲ್ಲಿ ನಡೆದಿದೆ.

ಕುಂಬ್ರ ಕಡೆಯಿಂದ ಪುತ್ತೂರು ಆಸ್ಪತ್ರೆಗೆ ರೋಗಿಯನ್ನು ಹೊತ್ತು ಬರುತ್ತಿದ್ದಾಗ ಈ ಘಟನೆ ನಡೆದಿದ್ದು,ಘಟನೆಯ ಬಳಿಕ ರೋಗಿಯನ್ನು ಇನ್ನೊಂದು ವಾಹನದಲ್ಲಿ ಪುತ್ತೂರಿಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: