ಮುಂಬೈ:ಹೊಸದಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನವೊಂದಕ್ಕೆ ಟಿಪ್ಪು ಸುಲ್ತಾನ್ ಹೆಸರನ್ನು ಇಡುವ ವಿಚಾರಕ್ಕೆ ಚರ್ಚೆ ಆರಂಭವಾಗಿದ್ದು, ಮಹಾರಾಷ್ಟ್ರ ಬಿಜೆಪಿ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದೆ.
ನಗರದ ಮಲಾಡ್ ನಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನಕ್ಕೆ ಟಿಪ್ಪು ಹೆಸರನ್ನು ಇಡುವ ವಿಚಾರಕ್ಕೆ ತಗಾದೆ ಎದ್ದಿದ್ದು ಶಿವಸೇನೆ ಮತ್ತು ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ಆರಂಭವಾಗಿ,ಟಿಪ್ಪು ತನ್ನ ಆಡಳಿತ ಅವಧಿಯಲ್ಲಿ ಸಾವಿರಾರು ನರಮೇಧ ನಡೆಸಿದ್ದಾನೆ, ಇಂತಹವರ ಹೆಸರನ್ನು ಇಟ್ಟರೆ ಹೋರಾಟ ನಡೆಸುವ ಎಚ್ಚರಿಕೆಯನ್ನು ಬಿಜೆಪಿ ನೀಡಿದೆ.