‘UPTET’ಪರೀಕ್ಷೆ ಬರೆಯಲು ಹೊರಟ ಗರ್ಭಿಣಿ ಹೆಣ್ಣು ಮಗುವಿಗೆ ಜನನ|ಮಗುವಿಗೆ ‘TET’ ಎಂದು ನಾಮಕರಣ

ಉತ್ತರ ಪ್ರದೇಶ: ಗರ್ಭಿಣಿಯೋರ್ವಳು ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ತೆರಳಿದ್ದ ವೇಳೆ ಮುದ್ದಾದ ಮಗುವಿಗೆ ಜನ್ಮ ನೀಡಿದ್ದು, ಅದಕ್ಕೆ TET ಎಂದು ನಾಮಕರಣ ಮಾಡಿದ ಅಪರೂಪದ ಘಟನೆ ಉತ್ತರ ಪ್ರದೇಶದ ಅಮ್ರೋಹ್​​​ದಲ್ಲಿ ನಡೆದಿದೆ.

ಭಾನುವಾರ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ UPTET ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆ ಬರೆಯುತ್ತಿದ್ದಾಗ,ಗರ್ಭಿಣಿ ಮಹಿಳೆಯೋರ್ವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ವೇಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಉತ್ತರ ಪ್ರದೇಶ ಗಜರೌಲಾದ ರಮಾಬಾಯಿ ಅಂಬೇಡ್ಕರ್​ ಪದವಿ ಕಾಲೇಜ್​​ನಲ್ಲಿ ರೇಣು ಎಂಬ ಮಹಿಳೆ UPTET ಪರೀಕ್ಷೆಗೆ ಹಾಜರಾಗಿದ್ದಳು. ಪರೀಕ್ಷೆ ಬರೆಯುತ್ತಿದ್ದ ವೇಳೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಪರೀಕ್ಷಾ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಇದರ ಬಗ್ಗೆ ಗೊತ್ತಾಗಿದೆ. ಹೀಗಾಗಿ, ಕೂಡಲೇ 108 ಆ್ಯಂಬುಲೆನ್ಸ್​ಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ

ಪರೀಕ್ಷೆ ಬರೆಯುತ್ತಿದ್ದ ವೇಳೆ ತಾಯಿಯು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಕಾರಣ ಅದಕ್ಕೆ ಆಸ್ಪತ್ರೆಯಲ್ಲಿ TET ಎಂದು ನಾಮಕರಣ ಸಹ ಮಾಡಿದ್ದಾರೆ. ಮಗುವಿಗೆ ಜನ್ಮ ನೀಡಿರುವ ರೇಣು ಮನೆಯಲ್ಲಿ ಖುಷಿಯ ವಾತಾವರಣ ಮೂಡಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಯೋಗೇಂದ್ರ ಸಿಂಗ್ ತಿಳಿಸಿದ್ದಾರೆ.

Leave A Reply

Your email address will not be published.