ಕಡಬ : ನೆಡುತೋಪಿನಲ್ಲಿ ಗಿಡ ನೆಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಬಳಕ್ಕ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ್ದು ವ್ಯಕ್ತಿಯೊಬ್ಬರ ತಲೆ ಮತ್ತು ಸೊಂಟಕ್ಕೆ ಗಂಭೀರ ಗಾಯವಾಗಿದೆ.
ಗಾಯಗೊಂಡ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರೇವಪ್ಪ ಎಂದು ಗುರುತಿಸಲಾಗಿದೆ. ಇವರು ಅರಣ್ಯ ಇಲಾಖೆಯಲ್ಲಿ ನೆಡುತೋಪುಗಳಲ್ಲಿ ಗಿಡ ನೆಡುವ ಕೆಲಸ ಮಾಡುತ್ತಿದ್ದರು.
ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು ಆಗಮಿಸಿದ್ದು,ಗಾಯಗೊಂಡ ವ್ಯಕ್ತಿಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ .