ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಿಂದ ಮಹತ್ವದ ಹೇಳಿಕೆ| ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ

ಬೆಂಗಳೂರು : ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಬಿ ಸಿ ನಾಗೇಶ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಶಾಲೆ ಆರಂಭವಾದರೂ ಚಂದನ ವಾಹಿನಿಯಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಒಂಭತ್ತನೇ ತರಗತಿಯ ಮಕ್ಕಳಿಗೆ ಶಾಲೆ ಆರಂಭದ ಬಗ್ಗೆ ತಜ್ಞರ ಸಲಹೆಯ ಮೇರೆಗೆ ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ಪೂರ್ಣ ಪ್ರಮಾಣದ ಆಫ್ ಲೈನ್ ತರಗತಿ ಪ್ರಾರಂಭ ಆಗುವವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ ಎಂದು ಸಚಿವ ಬಿ ಸಿ ನಾಗೇಶ್ ಭರವಸೆ ನೀಡಿದರು.

Leave A Reply

Your email address will not be published.