ಬೆಳ್ತಂಗಡಿ :ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ

ಬೆಳ್ತಂಗಡಿ: ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ನಾಪತ್ತೆಯಾದ ಘಟನೆ ನಿನ್ನೆ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿ ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿದ್ದು, ಪ್ರಥಮ ವರ್ಷದ ಬಿ.ಎ.ಎಂ.ಎಸ್ ವ್ಯಾಸಂಗ ಮಾಡುತ್ತಿದ್ದರು.

ಜ.27 ರಂದು ಬೆಳಿಗ್ಗೆ ಕಾಲೇಜಿಗೆಂದು ಹೋದವರು ಅತ್ತ ಕಾಲೇಜಿಗೂ ಹೋಗದೆ, ಇತ್ತ ಹಾಸ್ಟೆಲ್ ಗೂ ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಹಾಸ್ಟೆಲ್ ನ ವಾರ್ಡನ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಾಪತ್ತೆಯಾದ ವಿದ್ಯಾರ್ಥಿನಿಯ ಪತ್ತೆ ಕಾರ್ಯ ಮುಂದುವರೆದಿದೆ.

Leave A Reply

Your email address will not be published.