ದ.ಕ. : ಕೋವಿಡ್ ಸೋಂಕು ಹೆಚ್ಚಳ ,12 ಶಾಲೆಗಳು ಬಂದ್
ಮಂಗಳೂರು : ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಲ್ಲಿ 12 ಶಾಲೆಗಳನ್ನು ಬಂದ್ ಮಾಡಲಾಗಿದೆ.
ಜನವರಿ 1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ.
ಜಿಲ್ಲಾಧಿಕಾರಿಯವರು ಶಾಲೆಯಲ್ಲಿ ಐದಕ್ಕಿಂತ ಹೆಚ್ಚು ಕೊವಿಡ್ ಪ್ರಕರಣ ದಾಖಲಾದರೆ ಶಾಲೆ ಮುಚ್ಚುವಂತೆ ಆದೇಶವನ್ನು ನೀಡಿದ್ದರು, ಈ ಹಿನ್ನಲೆಯಲ್ಲಿ ಇದೀಗ 5 ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾದರೂ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.